ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ
ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿತ್ತು, ಈ ವೇಳೆ ರಭಸವಾಗಿ ಬಂದ ಖಾಸಗಿ ಬಸ್ ಏಕಾಏಕಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು. ಸದ್ಯ ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ ನ ಮುಂಭಾಗ … Read more