ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ.
ಮೂಲ ವೇತನದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ. ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ.
ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಘದ ಪರವಾಗಿ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಷಯ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಸಮಸ್ತ ನೌಕರರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
WhatsApp Group
Join Now