Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ

Micro Finance : ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ.

BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ

ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ನೆರೆ ರಾಜ್ಯಗಳಲ್ಲಿರುವ ಕಾನೂನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನನ್ನು ತರುತ್ತೇವೆ. ಒಂದು ವೇಳೆ ಸಾಲಗಾರರಿಗೆ ಕಿರುಕುಳ ನೀಡಿದರೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ  ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ಅಡಿಯಲ್ಲಿ ಬರುತ್ತವೆ. ಆರ್ಬಿಐ ನಿಯಮದಂತೆ ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ. ಯಾವುದೇ ಸಾಲಗಾರರಿಗೆ 3 ಬಾರಿಗಿಂತ ಹೆಚ್ಚು ಸಾಲ ಕೊಡುವಂತಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ನಿಯಮಕ್ಕಿಂತ ಹೆಚ್ಚು, ಅಂದರೆ, ಸುಮಾರು ಶೇ 28, 29 ರಷ್ಟು ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡುತ್ತೇವೆ. ಅಧಿಕ ಬಡ್ಡಿ ವಸೂಲಿ ಮಾಡ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

WhatsApp Group Join Now

Leave a Reply