Crop Damage : ನಮಸ್ಕಾರ ಸ್ನೇಹಿತರೇ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಆಗಿರುವ ಕಾರಣದಿಂದ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿಗೆ ಒಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ಹಣ ನೀಡಲು ಈಗ ರಾಜ್ಯ ಸರ್ಕಾರವು ಮುಂದಾಗಿದ್ದು, ಇದೀಗ ಬೆಳೆ ಹಾನಿ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಈ ಸಾಲಿನ ಬೆಳೆ ಪರಿಹಾರ ಹಣ ಮುಂದಿನ ಒಂದು ವಾರಗಳಲ್ಲಿ ಜಮಾ ಮಾಡಲಾಗುತ್ತದೆ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಮಾಡಲು ಆಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಹಾಗಿದ್ದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ಲವಾ.? ಎಂದು ಚೆಕ್ ಮಾಡುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಈ ವರ್ಷದ ಬೆಳೆ ಪರಿಹಾರ ಪಟ್ಟಿಯನ್ನು ಚೆಕ್ ಮಾಡುವುದು ಡೈರೆಕ್ಟ್ ಲಿಂಕ್ ಹಾಗು ವಿಧಾನ :-
• ಮೊದಲು ಈ ಕೆಳಗೆ ನೀಡಿರುವ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು
• ನಂತರ ನೀವು ನಿಮ್ಮ ಜಿಲ್ಲೆ ಮತ್ತು ತಾಲೂಕು ಹಾಗೂ ಹೋಬಳಿ, ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ. ಪೇಮೆಂಟ್ ಸಕ್ಸಸ್ ನ್ನು ಆಯ್ಕೆ ಮಾಡಿ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ.
• ನಂತರ ಒಂದು ಪಟ್ಟಿ ಕಾಣಿಸುತ್ತದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಿಕೊಳ್ಳಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಈ ವರ್ಷದ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡಲಾಗುತ್ತದೆ.