Crop Insurance & Loan Waiver : ರೈತರಿಗೆ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಖಾತೆಗೆ ಹಣ ಜಮೆ ಆಗುವ ಬಗ್ಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಾಗಿದ್ರೆ ರೈತರಿಗೆ ಯಾವಾಗ ಹಣ ಜಮೆಯಾಗಲಿದೆ ಅಥವಾ ಎಷ್ಟು ಮೊತ್ತ ಖಾತೆಗೆ ಜಮೆಯಾಗಲಿದೆ ತಿಳಿಯೋಣ.
ರಾಜ್ಯದಲ್ಲಿ ಅತಿವೃಷ್ಟಿ ಮತ್ತೆ ನೆರಹಾವಳಿಯಿಂದಾಗಿ ಬೆಳೆಯನ್ನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಕೂಡ ಜಮ ಆಗಲಿದೆ ಅಂತ ಹೇಳಿ ಕಂದಾಯ ಸಚಿವ ಕೃಷ್ಣ ಬೈರಗೌಡ ಅವರು ತಿಳಿಸಿದ್ದಾರೆ.
ಮುಂಗಾರು ಮಳೆಯಿಂದ ಸುಮಾರು 12.54 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ನಷ್ಟಕ್ಕೆ ಸುಮಾರು 2000 ಕೋಟಿ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾಗಿ ಸಮೀಕ್ಷೆ 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಮಳೆಯಿಂದ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿತ್ತು.
ಈ ಬೆಳೆಹಾನಿಗೆ ಪರಿಹಾರ ನೀಡಲು ಸಿದ್ಧತೆ ನಡೆಯುತ್ತಿದ್ದಾಗಲೇ ಸೆಪ್ಟೆಂಬರ್ ಅಂತ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಲಬುರ್ಗಿ, ಯಾದಗಿರಿ, ಬೀದರ್ ಮತ್ತು ವಿಜಯಾಪುರ ಜಿಲ್ಲೆಗಳಲ್ಲಿ ಸುಮಾರು 7.22 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಹೀಗಾಗಿ ಈ ನಾಲ್ಕು ಜಿಲ್ಲೆಗಳಲ್ಲಿ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಲಾಗುತ್ತಿದ್ದು, ಇದು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ಈಗಾಗಲೇ ಜಂಟಿ ಸಮೀಕ್ಷೆ ಮುಗಿರುವ ಒಂಬತ್ತು ಜಿಲ್ಲೆಗಳಲ್ಲಿನ ಸುಮಾರು 5.29 9 ಲಕ್ಷ ಹೆಕ್ಟೇರ್ ಬೆಳೆಹಾನಿಗೆ ಮೊದಲ ಹಂತದ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಅಂತ ಹೇಳಿ ಸಚಿವರು ಮಾಹಿತಿಯನ್ನ ನೀಡಿದ್ದಾರೆ. ಹಾಗಾಗಿ ಮಳೆಯಾಶ್ರಿತ ಬೆಳೆಹಾನಿಗೆ ಪ್ರತಿ ಹೆಕ್ಟೇರ್ ಗೆ 17,000, ನೀರಾವರಿ ಪ್ರದೇಶದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ ಗೆ 25,500, ಇನ್ನು ದೀರ್ಘಕಾಲಿಕ ಬೆಳೆ ಹಾನಿಗೆ ಪ್ರತಿ ಹೆಕ್ಟರ್ಗೆ 31,000 ರೂಪಾಯಿ ಖಾತೆಗೆ ಜಮಾ ಆಗಲಿದೆ.
ಈ ಪರಿಹಾರ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಇದರಿಂದಾಗಿ ರೈತರು ತಮ್ಮ ಕಳೆದುಕೊಂಡ ಬೆಳೆಗಳಿಗೆ ಸೂಕ್ತ ಪರಿಹಾರವನ್ನ ಪಡೆದು ಮುಂದಿನ ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಅನುಕೂಲ ಕೂಡ ಆಗಲಿದೆ.

ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
WhatsApp Group
Join Now