Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!

Crop Insurance : ನಮಸ್ಕಾರ ಸ್ನೇಹಿತರೇ, ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ.

ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.! 

ನೋಂದಣಿ :- ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿನ. ಕಡಲೆ ಬೆಳೆಗೆ ಡಿ.31 ಕೊನೆಯ ದಿನವಾಗಿದೆ.ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್ಗಳಿಗೆ ಸಂಪರ್ಕಿಸಬಹುದು.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿಗೆ (7996453241) ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎ ಅವರು ತಿಳಿಸಿದ್ದಾರೆ.

Leave a Reply