ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ (65) ಇದೀಗ ನಿಧನರಾಗಿದ್ದಾರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ ಸುಧಾಕರ್ ನಿಧನ ರಾಗಿದ್ದಾರೆ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಡಿಸುಧಾಕರ್ ಇನ್ನಿಲ್ಲ ಇಂದು ಬೆಳಿಗ್ಗೆ 3. 15 ಕ್ಕೆ ಸಚಿವ ಡಿ ಸುಧಾಕರ್ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯದಲ್ಲಿ ಚೇತರಿಕೆ ಕೂಡ ಕಾಣದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3. 15 ರ ಸುಮಾರಿಗೆ ಡಿ ಸುಧಾಕರ್ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಚಿವ ಸುಧಾಕರ್ ಅವರ ಆರೋಗ್ಯ ಸ್ಥಿತಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಿ ಸುದೀರ್ಘ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಂದು ಮುಂಜಾನೆ ಸುಮಾರು 3:15 ಗಂಟೆಗೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.
ಮೃತ ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ಸಚಿವ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿಯನ್ನು ಹೊತ್ತಿದ್ದ ಅವರು, ಜನಾನುರಾಗಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ವಿವಿಧ ಪಕ್ಷಗಳ ಮುಖಂಡರು ಸುಧಾಕರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. “ಸರಳ ಸಜ್ಜನಿಕೆಯ ರಾಜಕಾರಣಿಯನ್ನು ರಾಜ್ಯ ಕಳೆದುಕೊಂಡಿದೆ” ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರು ಮತ್ತು ಅವರ ಸ್ವಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಇನ್ನಿಲ್ಲ
WhatsApp Group
Join Now