Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

ರಾಜ್ಯದಲ್ಲಿ ಈಗಾಗಲೇ ಬಹುತೇಕ ಬರಪೀಡಿತ ಪ್ರದೇಶದ ಅರ್ಹ ರೈತರಿಗೆ 2 ಸಾವಿರ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪೂಟ್ಸ್ ಐಡಿ(FID) ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವಿತರಣೆ ಮಾಡಲಾಗುತ್ತಿದೆ. ಇನ್ನೂ ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು, ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)

ಈಗಾಗಲೇ ಅನುಮೋದನೆ ನೀಡಿರುವ ರಾಜ್ಯದ ಅರ್ಹ ಫಲಾನುಭವಿ ರೈತರ ಮಾಹಿತಿಯ ಪಟ್ಟಿಯನ್ನು ಆಯಾ ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಎಲ್ಲಾ ವಿವರಗಳನ್ನ ಪ್ರಕಟಿಸಲಾಗಿದೆ.

ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?

ರಾಜ್ಯದ ಬರಪೀಡಿತ ಪ್ರದೇಶದ ರೈತರು ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ(FID) ಕಡ್ಡಾಯವಾಗಿರುವುದರಿಂದ ಇದುವರೆಗೂ ಫ್ರೂಟ್ಸ್ ಐಡಿ(FID) ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ(FID) ಪಡೆದುಕೊಳ್ಳಬಹುದು.

ಕೃಷಿ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ : ಪರಿಹಾರ ಹಣ ಸಂದಾಯ ವರದಿ (Parihara Payment Report)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply