e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ

Spread the love

e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.

WhatsApp Group Join Now

ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ

ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.

WhatsApp Group Join Now

ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ.

ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್

WhatsApp Group Join Now

ಇ-ಶ್ರಮ ಪೋರ್ಟಲ್‌ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.


Spread the love

Leave a Reply