ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ (Ballari) ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿಯಲ್ಲಿ (PG) ನಡೆದಿದೆ. ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಮೃತ ವಿದ್ಯಾರ್ಥಿಯನ್ನು ವಿಶ್ವಾಸ್ (24) ಎಂದು ಗುರುತಿಸಲಾಗಿದೆ.
ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಮೃತ ವಿದ್ಯಾರ್ಥಿ ವಿಶ್ವಾಸ್ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಪಿಜಿ ಸಹಪಾಠಿಗಳೊಂದಿಗೆ ಜಗಳ ನಡೆದಿತ್ತು ಎಂಬ ಆರೋಪ
ಸಿರುಗುಪ್ಪ ತಾಲೂಕಿನ ಟಿ. ರಾಂಪುರ ಗ್ರಾಮದ ನಿವಾಸಿ ವಿಶ್ವಾಸ್ ಆಗಿದ್ದ ವಿಶ್ವಾಸ್, ಬಳ್ಳಾರಿಯ RYMEC ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿಯಲ್ಲಿ ವಾಸವಾಗಿದ್ದರು. ಆದ್ರೆ, ವಿಶ್ವಾಸ್ ಪಿಜಿ ಸಹಪಾಠಿಗಳೊಂದಿಗೆ ಜಗಳ ನಡೆದಿತ್ತು ಎನ್ನಲಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೃತನ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತನಿಖೆಯ ಬಳಿಕವೇ ತಿಳಿದು ಬರಬೇಕಿದೆ.
ಕಾಲುವೆ ಬಳಿ ಯುವಕನ ಭೀಕರ ಹತ್ಯೆ
ಬಳ್ಳಾರಿಯ ಎಲ್ಎಲ್ಸಿ ಕಾಲುವೆ ಬಳಿ ಯುವಕನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ ಬಳಿಕ ಸಾಕ್ಷ್ಯ ನಾಶ ಪಡಿಸಲು ಪೆಟ್ರೋಲ್ನಿಂದ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬಳ್ಳಾರಿ ತಾಲೂಕಿನ ಮೋಕಾ ಬಳಿಯ ಎಲ್ಎಲ್ಸಿ ಕಾಲುವೆ ಬಳಿ ಈ ಘಟನೆ ನಡೆದಿದ್ದು, ಮೃತ ಯುವಕ ಆಂಧ್ರದ ಅನಂತಪುರ ಜಿಲ್ಲೆಯ ಬೊಲ್ಲನಗುಡ್ಡಂ ನಿವಾಸಿ ಬಸವನಗೌಡ (27) ಎಂದು ಗುರುತಿಸಲಾಗಿದೆ. ಬಳ್ಳಾರಿಯ ಖಾಸಗಿ ಲ್ಯಾಬ್ನಲ್ಲಿ ಟೆಕ್ನಿಷಿಯನ್ ಆಗಿದ್ದ ಬಸವನಗೌಡನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಸುಮಾರು 13 ಕಿ.ಮೀ. ದೂರದಲ್ಲಿ ಮೃತದೇಹ ಸುಟ್ಟು ಹಾಕಿದ್ದಾರೆ. ಸದ್ಯ ಘಟನೆ ಸಂಬಂಧ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು! ಪಿಜಿಯಲ್ಲಿ ಜೊತೆಯಲ್ಲಿದ್ದವರೇ ಜೀವ ತೆಗೆದ್ರಾ?
WhatsApp Group
Join Now