ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!

Spread the love

ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ.

ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾ ಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿ ದ್ದರು. ರಜೆ ಇದ್ದರಿಂದ ಈಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ಆಗ ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆ ಕಡೆ ಬರಲು ಮುಂದಾಗಿದ್ದಾರೆ.

ಇದೇ ವೇಳೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಕತ್ತಲೆಯಲ್ಲಿ ಕಿಟಕಿ ಹಾಗೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಮನೆಯ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿದ್ದ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

WhatsApp Group Join Now

Spread the love

Leave a Reply