ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ

Spread the love

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ.

Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!

ಪ್ರಕಾಶ್ ರಾಜ್ ಅವರು ಎಡಪಂಕ್ತೀಯ ಚಿಂತನೆಗಳಿಂದ ಪ್ರಭಾವಿತರಾದವರು. ಅವರು ಬಿಜೆಪಿ ನಿರ್ಧಾರಗಳನ್ನು ಸಾಕಷ್ಟು ಟೀಕೆ ಮಾಡುತ್ತಾ ಇರುತ್ತಾರೆ. ಈಗ ಅವರು ಕುಂಭ ಮೇಳದಲ್ಲಿ ಭಾಗಿ ಆಗಿ ಪವಿತ್ರ ಸ್ನಾನ ಮಾಡುತ್ತಿರುವ ರೀತಿಯಲ್ಲಿ ಎಐ ಫೋಟೋ ಮಾಡಲಾಗಿತ್ತು. ಪೋಟೋ ವೈರಲ್ ಮಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು ನೀಡಿದ್ದಾರೆ.

ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಪ್ರಕಾಶ್ ರೈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

‘ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದರಲ್ಲಿ ತಪ್ಪಿಲ್ಲ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಾಂತ ಅವರ ನಂಬಿಕೆಯನ್ನ ಪ್ರಶ್ನೆ ಮಾಡಲ್ಲ. ಅದನ್ನ ರಾಜಕಾರಣಕ್ಕೆ ಬಳಸಿಕೊಳ್ಳುವುದು ತಪ್ಪು’ ಎಂದಿದ್ದಾರೆ ಪ್ರಕಾಶ್ ರೈ.

WhatsApp Group Join Now

Spread the love

Leave a Reply