ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ದಮೋನೆ (50) ಮೃತಪಟ್ಟವರು.
ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಯಲ್ಲಿದ್ದ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಕುಟುಂಬಸ್ಥರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲಿಸರು ಸ್ಥಳಕ್ಕೆ ಆಗಮಿಸ್ ಪಾರ್ಥಿವ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
WhatsApp Group
Join Now