Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?

Free Laptop Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಲ್ಯಾಪ್ ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಇಲಾಖೆ ಮುಂದಾಗಿದ್ದು, ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು ಖರೀದಿಗಾಗಿ ನಿಗದಿಪಡಿಸಲಾಗಿದೆ. ಈ ಕುರಿತು ಈಗಾಗಲೇ ಅಧಿಸೂಚನೆಯನ್ನ ಹೊರಡಿಸಲಾಗಿದ್ದು, ಟೆಂಡ‌ರ್ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆಯ ದಿನವಾಗಿದೆ.

ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop Scheme)

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ ರಾಜ್ಯ ಸರ್ಕಾರವು ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2010ರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮೊದಲು ಈ ಯೋಜನೆಯಡಿ ಡೆಸ್ಕ್‌ಟಾಪ್‌ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿತ್ತು. ಇದೀಗ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುತ್ತಿದೆ.

ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?

ಆರಂಭದಲ್ಲಿ ಜಿಲ್ಲಾ ಹಂತದಲ್ಲಿ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿತ್ತು. ಬಳಿಕ ವಿದ್ಯಾರ್ಥಿಗಳ ಒತ್ತಾಯದಿಂದ 2012ರಿಂದ ಇದನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಈ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇದೀಗ 2024ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು ತಯಾರಿ ನಡೆದಿದೆ.

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ 1, 2 ಹಾಗೂ 3ನೇ ಸ್ಥಾನ ಪಡೆದವರಿಗೆ ಉಚಿತ ಲ್ಯಾಪ್‌ಟಾಪ್(Free Laptop) ವಿತರಣೆ ಮಾಡಲಾಗುತ್ತದೆ. ಇವರನ್ನು ಹೊರತುಪಡಿಸಿ ಬ್ಲಾಕ್‌ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೂ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.

ಪ್ರತೀ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಎರಡೂರು ತಿಂಗಳಲ್ಲಿ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ (Free Laptop) ವಿತರಿಸಲಾಗುತ್ತದೆ. ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಟಾಪರ್‌ಗಳು ಹಾಗೂ ಬ್ಲಾಕ್ ಮಟ್ಟದ ಟಾಪರ್‌ ಗಳು ಸೇರಿ ಸಾವಿರಾರು ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್‌ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?

ಸದ್ಯಕ್ಕೆ ಉಚಿತ ಲ್ಯಾಪ್‌ಟಾಪ್‌ (Free Laptop) ವಿತರಣೆಗೆ ಸಂಬಂಧಿಸಿದಂತೆ 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಟರ್‌ ಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ (Free Laptop) ಸಿಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿಯೇ ಲ್ಯಾಪ್‌ಟಾಪ್ ವಿತರಣೆ ಕುರಿತ ಅಧೀಕೃತ ಮಾಹಿತಿ ಬಿಡುಗಡೆ ಮಾಡಲಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply