ರೈತರಿಗೆ ಭರ್ಜರಿ ಗುಡ್‌ ನ್ಯೂಸ್ :‌ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ

Spread the love

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿ ಈ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಯ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಅದರ ಉಪಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಕೊಂಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿರಬೇಕು. ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಸೌಲಭ್ಯ ಲಭ್ಯವಿರುತ್ತದೆ. ಈಗಾಗಲೇ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದವರು ಹಾಗೂ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಆಸಕ್ತ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://dbcdo.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ (ದೂ.ಸಂ.: 08182-229634) ಅನ್ನು ಸಂಪರ್ಕಿಸಬಹುದು.

ಗಂಗಾ ಕಲ್ಯಾಣ ಯೋಜನೆಗೆ ಅರ್ಹತೆ :-

• ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
• ಜಮೀನು ಕೃಷಿ ಚಟುವಟಿಕೆಯಲ್ಲಿ ಇರಬೇಕು.
• ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
• ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
• ವಯಸ್ಸು 18 ರಿಂದ 60 ವರ್ಷಗಳೊಳಗಿರಬೇಕು.
• ವಾರ್ಷಿಕ ಕುಟುಂಬ ಆದಾಯ – (ಗ್ರಾಮಾಂತರ: ರೂ. 98,000 ಒಳಗೆ, ಪಟ್ಟಣ: ರೂ. 1,20,000 ಒಳಗೆ)
• ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು

ಗಂಗಾ ಕಲ್ಯಾಣ ಯೋಜನೆಯಡಿ 4 ಲಕ್ಷ ರೂ.ವರೆಗೆ ಸಬ್ಸಿಡಿ ನೀಡುವ ಮೂಲಕ ಬೋರ್‌ವೆಲ್ ಕೊರೆಸಿಕೊಳ್ಳುವ ಅವಕಾಶ ನೀಡಲಾಗಿದೆ.

ಗಂಗಾ ಕಲ್ಯಾಣ ಯೋಜನೆಗೆ ಅಗತ್ಯ ದಾಖಲೆಗಳು :-

• ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್‌ಬುಕ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಸ್ವಂತ ಜಮೀನಿನ ಪಹಣಿ
• ಅರ್ಜಿದಾರರ ಭಾವಚಿತ್ರ
• ಬಿಪಿಎಲ್ ರೇಷನ್ ಕಾರ್ಡ್
• ಮೊಬೈಲ್ ಸಂಖ್ಯೆ

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now

Spread the love

Leave a Reply