ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಎನ್ನುವಂತೆ ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಾಸ್ ಕಳುಹಿಸಿದ್ದಾರೆ.
ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು.
ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ.
ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ ಇದೆ. ಇದಲ್ಲದೇ ಎಸ್ಸಿ ಒಳಮೀಸಲಾತಿ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ರಾಜ್ಯಪಾಲರು ಕೋರಿದ್ದಾರೆ. ಇದಲ್ಲದೇ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬಿಲ್ ಕೂಡ ವಾಪಾಸ್ ಕಳುಹಿಸಲಾಗಿದೆ. ಇನ್ನುಳಿದ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
WhatsApp Group
Join Now