Grama Panchayath Jobs : ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ – 45 ಹುದ್ದೆಗಳಿಗೆ ಅರ್ಜಿ ಆಹ್ವಾನ.!

Grama Panchayath Jobs : ನಮಸ್ಕಾರ ಸ್ನೇಹಿತರೇ, ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ 32 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ. ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಹುದ್ದೆಗಳ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಹುದ್ದೆ ವಿವರ :-

ಜಿಲ್ಲೆಯ ಧಾರವಾಡ ತಾಲೂಕಿನಲ್ಲಿ 7, ಹುಬ್ಬಳ್ಳಿ ತಾಲೂಕಿನಲ್ಲಿ 7, ಕುಂದಗೋಳ ತಾಲೂಕಿನಲ್ಲಿ 6, ನವಲಗುಂದ ತಾಲೂಕಿನಲ್ಲಿ 6, ಕಲಘಟಗಿ ತಾಲೂಕಿನಲ್ಲಿ 2, ಆಳ್ನಾವರ ತಾಲೂಕಿನಲ್ಲಿ 2, ಅಣ್ಣಿಗೇರಿ ತಾಲೂಕಿನಲ್ಲಿ 2 ಹುದ್ದೆಗಳ ಭರ್ತಿ ನಡೆಸಲಾಗುವುದು.

PhonePe : ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?

ವಿದ್ಯಾರ್ಹತೆ :-

ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್‌ ಮಾಡಿರಬೇಕು. ಜತೆಗೆ ಸರ್ಟಿಫಿಕೇಶನ್ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 3 ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಒಂದು ವೇಳೆ ಸರ್ಟಿಫಿಕೇಶನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ಮೀಸಲಾತಿ ಬಿಂದುವಿನಂತೆ ಆಯ್ಕೆಗೆ ಪರಿಗಣಿಸಲಾಗುವುದು.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ವಯಸ್ಸಿನ ಅರ್ಹತೆಗಳು ಅರ್ಜಿ ಸ್ವೀಕರಿಸಲು ನಿಗದಿತ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಕೆ :-

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ಮಾಜಿ ಸೈನಿಕರಿಗೆ 200 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಈ ಹುದ್ದೆಗೆ ಮೆರಿಟ್ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ನವೆಂಬರ್ 5ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಡಿಸೆಂಬರ್ 4 ಆಗಿದೆ. ಅಭ್ಯರ್ಥಿಗಳು https://zpdharwad.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ.

Leave a Reply