ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ ಅಜ್ಜಿಯನ್ನು ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್ 24ರಂದು ಘಟನೆ ನಡೆದಿತ್ತು.
ತಡವಾಗಿ ಬೆಳಕಿಗೆ ಬಂದಿದೆ. ಎಫ್ಎಸ್ಎಲ್ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಅಜ್ಜಿ ಮೆಹಬೂಬಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಡಿಸೆಂಬರ್ 24ರಂದು ಚೇಳೂರು ಪಟ್ಟಣದಲ್ಲಿ ಮೆಹಮೂಬಿ ಎಂಬಾಕೆಯ ಮನೆಯಲ್ಲಿ ಈಕೆಯ ಮೊಮ್ಮಗಳ 40 ದಿನದ ಗಂಡು ಮಗು ಸಾವನ್ನಪ್ಪಿತ್ತು. ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಅಜ್ಜಿ ಮಣ್ಣು ಸಹ ಮಾಡಿಸಿಬಿಟ್ಟಿದ್ದಳು.
ಆದರೆ ಅಜ್ಜಿಯ ಮೇಲೆ ಅನುಮಾನಗೊಂಡ ಮೊಮ್ಮಗಳು, ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೇರೆಗೆ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಎಫ್ಎಸ್ಎಲ್ ವರದಿಗೆ ಕಳುಹಿಸಲಾಗಿತ್ತು. ಎಫ್ಎಸ್ಎಲ್ ವರದಿಯಲ್ಲಿ ಮಗು ಉಸಿರುಗಟ್ಟಿಸಿ ಕೊಂದಿರುವುದಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಮಗುವಿನ ಅಜ್ಜಿಯೇ ಕೊಲೆ ಮಾಡಿರುವುದು ಬಯಲಾಗಿದ್ದು, ಮೆಹಬೂಬಿಯನ್ನ ಬಂಧಿಸಿ ಜೈಲಿಗಟ್ಟಲಾಗಿದೆ.
ಅಜ್ಜಿಯ ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹವಾಗಿದ್ದು, ಬಾಣಂತನಕ್ಕೆ ಅಂತ ಅಜ್ಜಿಯ ಮನೆಗೆ ಬಂದಿದ್ದಳು. ಅಜ್ಜಿಗೆ ಅನ್ಯಧರ್ಮದ ಯುವಕನೊಂದಿಗೆ ಪ್ರೇಮ ವಿವಾಹವಾಗಿರುವುದು ಇಷ್ಟವಿರಲಿಲ್ಲ. ಹಾಗೂ ಮಗುವನ್ನ ನೋಡಿಕೊಳ್ಳಲು ಆಗುವುದಿಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ.
ಒಟ್ಟಿನಲ್ಲಿ ಪ್ರಪಂಚ ನೋಡವ ಮೊದಲೇ ಹಸುಗೂಸನ್ನು ಹತ್ಯೆಗೈಯುವ ಮೂಲಕ ಅಜ್ಜಿ ಜೈಲುಪಾಲಾದರೆ, ಇತ್ತ 9 ತಿಂಗಳ ನವ ಮಾಸ ಹೊತ್ತು ಹೆತ್ತ ತಾಯಿ ತನ್ನ ಮಗನನ್ನ ಕಳೆದುಕೊಂಡು ಜೀವನಪರ್ಯಂತ ನೋವು ಅನುಭವಿಸುವಂತಾಗಿದೆ.
ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
WhatsApp Group
Join Now