ಕನ್ನಡ ನ್ಯೂಸ್ ಟೈಮ್ : ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ರಾಜ್ಯದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್ ಇರುವ ಎರಡು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಬೆಳಗಾವಿಯಲ್ಲಿ ಸಂಭವಿಸಿದ ಅಪಘಾತದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, 15ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ. ಹಾಗೂ 16 ಹಾಗೂ 17 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದುಕುಳಿತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಜಮೆ ಆಗುತ್ತದೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ. ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ. ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
6 ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ, ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಬುದ್ದಿ ಹೇಳಿದ್ದೆ. ಇದರ ಮಧ್ಯೆಯೂ ಕ್ಷೇತ್ರದ ಹೊರಗಿನ ಐದಾರು ಮುಖಂಡರು ಫೈನಾನ್ಸ್ ಮಾಡಿಸುತ್ತಿದ್ದರು. ಸುಮಾರು 20 ಸಾವಿರ ಮಹಿಳೆಯರು ಫೈನಾನ್ಸ್ ತೆಗೆದುಕೊಂಡು ಬಿಟ್ಟಿದ್ದರು ಎಂದು ಸಚಿವರು ತಿಳಿಸಿದರು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ಜನರ ಎದುರು ಕೇಕ್ ಕತ್ತರಿಸುವ ಮೂಲಕ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಜನ್ಮದಿನದ ನಿಮಿತ್ತ ಗೃಹಕಚೇರಿಗೆ ಆಗಮಿಸಿದ್ದ ಕ್ಷೇತ್ರದ ಜನರನ್ನು ಸಚಿವರು ಭೇಟಿಯಾದರು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಚಿವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದರು.