Gruhalakshmi Scheme : ಇಡೀ ಕರ್ನಾಟಕದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭಾರಿ ದೊಡ್ಡ ಗುಡ್ ನ್ಯೂಸ್. ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ಹಣ ಜಮಾ ಆಗಿಲ್ಲ. ಅವರಿಗೆ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾರಿಗೆಲ್ಲ ಬಂದಿಲ್ಲವೋ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ.
ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಣ ಬಿಡುಗಡೆ ಆಗಲಿದೆ. ಉಳಿದ ಜಿಲ್ಲೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. ಮತ್ತು ಇಲ್ಲಿಯವರೆಗೂ ಇನ್ನು ಕೂಡ ಯಾರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ, ಹಣ ಜಮಾ ಆಗಿಲ್ಲ. ಎಲ್ಲ ಮಹಿಳೆಯರ ಖಾತೆಗಳಿಗೆ ಏಕಕಾಲದಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಯಾವ ಜಿಲ್ಲೆಗಳಿಗೆ ಇಂದು ಹಣ ಬಿಡುಗಡೆ ಆಗಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಂದ ಹೆಚ್ಚುವರಿ ಅಕ್ಕಿ, ಹಣವೂ ಇಲ್ಲ : ‘ಗೃಹಲಕ್ಷ್ಮಿ’ಯರದ್ದೂ ಇದೇ ಪಾಡು.!
ರಾಜ್ಯದಲ್ಲಿ ಈ ಮೊದಲಿನಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳಿಗೆ ಹಣ ಬಿಡುಗಡೆ ಆಗಲಿದೆ. ಅಂದ್ರೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಹಾಗು ಗದಗ ಸೇರಿದಂತೆ ಈ ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.