Gruhalakshmi : ನಮಸ್ಕಾರ ಸ್ನೇಹಿತರೇ, ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮೀಯರಿಗೆ ಮೂರು ತಿಂಗಳಿನಿಂದ ಹಣ ಸಂದಾಯ ಆಗಿಲ್ಲ. ಮತ್ತೆ ಕೆಲವು ಜಿಲ್ಲೆಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ ಜಮಾ ಆಗಬೇಕಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಶೀಘ್ರವೇ ಹಣ ಸಂದಾಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಜನರ ಸೇವೆ ಮಾಡಲು ಮತ್ತೆ ಆರಂಭಿಸಿದ್ದೇನೆ
ಬೆಳಗಾವಿಯ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು. ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ
ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.