Gruhalakshmi Scheme Amount : ಗೃಹಲಕ್ಷ್ಮಿಗೆ ಈ-ಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

Spread the love

Gruhalakshmi Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್‍ನವರು ಈ-ಕೆವೈಸಿ ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿ ಮಹಿಳೆಯರನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್‍ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now

ಗೃಹಲಕ್ಷ್ಮೀ ಯೋಜನೆಯ ಹಣ ಮೊದಲ ಹಂತದಲ್ಲಿ ಈ ಕೆಳಗಿನ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂಪಾಯಿ ಹಣ ಬಿಡುಗಡೆ ಪ್ರಕ್ರಿಯೆ ಶುರುವಾಗಿದೆ. ಯಾವ ಜಿಲ್ಲೆಗೆ ಮೊದಲು ಬಿಡುಗಡೆಯಾಗಲಿದೆ ಎಂದು ಈ ಕೆಳಗಡೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now

ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಹಾವೇರಿ, ಕೋಲಾರ, ಚಿತ್ರದುರ್ಗ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply