ಕರ್ನಾಟಕ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ.
ಇನ್ನು ಮುಂದೆ ಮಹಿಳೆಯರ ಹೆಸರು ಈ ಲಿಸ್ಟ್ನಲ್ಲಿ ಇದ್ದರೆ ಮಾತ್ರ ಆ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಬಹುದು. ಹಾಗಾದ್ರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಬಹು ದೊಡ್ಡ ಬದಲಾವಣೆ ಏನು.? ಅನ್ನುವುದನ್ನು ತಿಳಿಯೋಣ.
ಕಳೆದ ಮೂರು ನಾಲ್ಕು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತೆ ಅಂತ ಸಾಕಷ್ಟು ಮಹಿಳೆಯರು ಕಾದು ಕುಳಿತಿದ್ದರು. ಆದರೆ ದೀಪಾವಳಿ ಹಬ್ಬಕ್ಕೂ ಕೂಡ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿಲ್ಲ. ಇದರ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಇನ್ನೊಂದು ನಿಯಮವನ್ನ ಜಾರಿಗೆ ತಂದಿದೆ.
ಇನ್ನು ಮುಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ ಬೇಕಾದರೆ ಆ ಮಹಿಳೆಯರ ಹೆಸರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಇ-ರೇಷನ್ ಕಾರ್ಡ್ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಇ-ರೇಷನ್ ಕಾರ್ಡ್ ಪಟ್ಟಿಯಲ್ಲಿ ಮಹಿಳೆಯರ ಹೆಸರು ಇದ್ದರೆ ಮಾತ್ರ ಆ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣವನ್ನ ಜಮ ಮಾಡಲಾಗುತ್ತದೆ.
ಮಹಿಳೆಯರು ಸೇವಾ ಸಿಂಧು ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ನಿಮ್ಮ ಹೆಸರು ಇ-ರೇಷನ್ ಕಾರ್ಡ್ ಪಟ್ಟಿಯಲ್ಲಿ ಇದೆಯಾ ಅಥವಾ ಇಲ್ಲವಾ ಅನ್ನುವುದನ್ನ ಪರಿಶೀಲನೆ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಲಕ್ಷಾಂತರ ಮಹಿಳೆಯರ ಹೆಸರನ್ನ ಈ ಪಟ್ಟಿಯಿಂದ ತೆಗೆದು ಹಾಕಲಾಗಿದೆ.
ಯಾವ ಮಹಿಳೆಯರ ಹೆಸರನ್ನ ಈ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೋ, ಆ ಮಹಿಳೆಯರ ಖಾತೆಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ. ಅದೇ ರೀತಿಯಲ್ಲಿ ಮಹಿಳೆಯರು ಆಹಾರ ಮತ್ತು ನಾಗರಿಕ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಕೆಲವು ಮಾಹಿತಿಗಳನ್ನ ಕೊಡುವುದರ ಮೂಲಕ ನಿಮ್ಮ ಹೆಸರನ್ನ ಚೆಕ್ ಮಾಡಿಕೊಳ್ಳಬಹುದು.
ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
WhatsApp Group
Join Now