ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣ ಬಹಿರಂಗ ಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

Spread the love

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ಡಿಎ ಟಿಕೆಟ್ ಕೈತಪ್ಪಲು ಅಸಲಿ ಕಾರಣವೇನು ಎಂಬುದನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.

ದೇವೇಗೌಡರಿಗೆ ಎನ್ ಡಿಎ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲಾ ಚರ್ಚೆಗಳ ನಡುವೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣವೇನು ಎಂಬುದನ್ನು ಹೇಳಿದ್ದಾರೆ.

ಮಂಡ್ಯ ತಾಲೂಕಿನ ತಗ್ಗಹಳ್ಳಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯಸಭೆ ಟಿಕೆಟ್‌ ಗಾಗಿ ಹೆಚ್.ಡಿ.ದೇವೇಗೌಡರು ಅರ್ಜಿಯನ್ನೇ ಹಾಕಿರಲಿಲ್ಲ ಎಂದು ತಿಳಿಸಿದ್ದಾರೆ. ಹೆಚ್.ಡಿ.ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ. ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಭಯ ಶುರುವಾಗಿದ್ದು, ನಮ್ಮ ನಡುವೆ ಬಿರುಕು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

ದೇವೇಗೌಡರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದಿದ್ದರು ಎಂದು ಹೆಚ್ಡಿಕೆ ತಿಳಿಸಿದ್ದಾರೆ.

ಕಳೆದ ಬಾರಿ ದೇವೇಗೌಡರ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ. ಬದಲಾಗಿ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಕಳೆದ ಬಾರಿ ಅಭ್ಯರ್ಥಿ ಹಾಕಲ್ಲ ಎಂದು ಯಡಿಯೂರಪ್ಪನವರು ಕರೆ ಮಾಡಿ ತಿಳಿಸಿದ್ರು. ಅದಾದ ಬಳಿಕ ನಾನು ಒತ್ತಾಯ ಮಾಡಿ ಅಭ್ಯರ್ಥಿ ಮಾಡಿದ್ದು ಎಂದು ಹೇಳಿದರು.

WhatsApp Group Join Now

Spread the love

Leave a Reply