Rain Updates : ರಾಜ್ಯದಲ್ಲಿ ಮತ್ತೆ ಮಳೆ.! ಮಳೆ.! ಮಳೆ.! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ.!

Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ.

ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ.

ಇದನ್ನೂ ಕೂಡ ಓದಿ : Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್ನಲ್ಲಿ ಮಳೆಯಾಗಿದೆ.

ಕರ್ನಾಟಕದ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಂದು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ. ನವೆಂಬರ್ 12 ಮತ್ತು 13 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Leave a Reply