MUDA Case : ಮುಡಾ ಹಗರಣದಲ್ಲಿ `ಸಿಎಂ’ ಗೆ ಬಿಗ್ ಶಾಕ್ : ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Spread the love

MUDA Case : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿಯನ್ನ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ನೀಡಿದೆ.

WhatsApp Group Join Now

ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?

ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.

WhatsApp Group Join Now

ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿರುವಂತಹ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಇದನ್ನೂ ಕೂಡ ಓದಿ : ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ದೇವರಂತೆ ಬಂದು ತಪ್ಪಿಸಿದ ಕೋತಿಗಳು

WhatsApp Group Join Now

ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಿದ್ದು,. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು ಪ್ರಕಟಿಸಿದೆ.


Spread the love

Leave a Reply