ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ನಡೆಸಿದೆ.
ನೇಮೋತ್ಸವ ಆರಂಭಕ್ಕೂ ಮುನ್ನ ದೈವಸ್ಥಾನದಲ್ಲಿ ದೈವ ಎಣ್ಣೆಬೂಳ್ಯ ನೀಡುವ ವಾಡಿಕೆ ಸಂಪ್ರದಾಯವಿದೆ. ಈ ವೇಳೆ ದೈವ ನರ್ತಕರು ತುಳುನಾಡಿನ ದೈವಾರಾಧನೆ ಸಂಪ್ರದಾಯ ಮೀರಿ ವರ್ತಿಸಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.
ಈ ವೇಳೆ ದೈವ ನರ್ತಕ ರಿಷಬ್ ಕಾಲ ಮೇಲೆ ಮಲಗಿದ್ದರು. ಕೋಲದ ವೇಳೆ ದೈವ ನರ್ತಕ ರಿಷಬ್ ಜೊತೆಗೆ ವರ್ತಿಸಿದ ರೀತಿ ವಿರುದ್ಧ ಟೀಕೆ ವ್ಯಕ್ತವಾಗಿದೆ. ‘ತುಳುನಾಡಿನ ದೈವಾರಾಧನೆಯಲ್ಲಿ ದೈವಗಳು ಈ ರೀತಿ ವರ್ತಿಸುವುದಿಲ್ಲ.ರಿಷಬ್ ಕಾಲ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ,ದೈವವಲ್ಲ ಬದಲಾಗಿ ನರ್ತಕ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಟ ರಿಷಬ್ ಶೆಟ್ಟಿಯ ಎರಡೂ ಕಾಂತಾರ ಸಿನಿಮಾಗಳಲ್ಲಿ ಮಾರ್ಗದರ್ಶಕರಾಗಿದ್ದವರೇ ಹರಕೆ ನೇಮೋತ್ಸವದ ವೇಳೆ ಎಣ್ಣೆಬೂಳ್ಯ ಸ್ವೀಕರಿಸಿದ್ದರು. ಈ ವೇಳೆ ದೈವ ನಟ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ಭಾವುಕ ಸನ್ನಿವೇಶ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಳುನಾಡ ದೈವಾರಾಧಕರ ಪರ-ವಿರೋಧ ಚರ್ಚೆ ನಡೆದಿದೆ. ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ದೈವ ನರ್ತನ ನಿಯಮ ಮೀರಿ ವರ್ತಿಸಬಾರದು. ದೈವಾರಾಧನೆಯ ಕಟ್ಟಲೆಗಳನ್ನು ಮೀರಿ ದೈವ ಕೋಲದ ಸಂಪ್ರದಾಯ ಮರೆತು ವರ್ತಿಸಿದ್ದಾರೆ. ಸದ್ಯ ದೈವ ನರ್ತಕರ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದೆ.
‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
WhatsApp Group
Join Now