ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ

Spread the love

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿವೆ. ಇದನ್ನು ಗಮನಿಸಿದ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಬಗ್ಗೆ ಸ್ವತಃ ದೊಡ್ದಣ್ಣ ಸ್ಪಷ್ಟನೆ ನೀಡಿದ್ದಾರೆ.

‘ಪಬ್ಲಿಕ್ ಫ್ರೆಂಡ್’ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ‘ದೊಡ್ಡಣ್ಣ ಇನ್ನಿಲ್ಲ’ ಎಂದು ಪೋಸ್ಟ್ ಹಾಕಲಾಗಿದೆ. ಮರಣ ಎಂದು ಜೂನ್ 12ರ ಡೇಟ್ ಹಾಕಲಾಗಿದೆ. ‘ನಿಮ್ಮ ಅಭಿನಯ, ನಿಮ್ಮ ಸಾಧನೆ ಯಾವಾಗಲೂ ನಮ್ಮ ಜೊತೆ ಇರುತ್ತದೆ’ ಎಂದು ನೆನಪಿಸಿಕೊಳ್ಳಲಾಗಿದೆ. ಇದನ್ನು ನೋಡಿದ ದೊಡ್ದಣ್ಣ ಶಾಕ್ ಆಗಿದ್ದಾರೆ. ತಾನು ಬದುಕಿದ್ದಾಗಲೇ ಶ್ರದ್ಧಾಂಜಲಿ ಸಲ್ಲಿಸಿರುವ ಹಾಗೂ ಸುಳ್ಳು ಸುದ್ದಿ ಹರಡಿರುವವರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ದೊಡ್ದಣ್ಣ, ನಾನು ಸತ್ತಿಲ್ಲ. ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮನೆಯಲ್ಲಿ ಆರಾಮಾಗಿ ಟೀ ಕುಡಿಯುತ್ತಾ, ಟಿವಿ ನೋಡುತ್ತಾ ಕುಳಿತಿದ್ದೇನೆ. ನನಗೇನೂ ಆಗಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶ್ರದ್ಧಾಂಜಲಿಯ ಪೋಸ್ಟರ್ ಸಂಪೂರ್ಣವಾಗಿ ನಕಲಿ ಮತ್ತು ಎಡಿಟೆಡ್ ಆಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಹಿರಿಯ ನಟರ ಆರೋಗ್ಯದ ಬಗ್ಗೆ ಪದೇ ಪದೇ ಇಂತಹ ವಿ ಸುಳ್ಳು ಸುದ್ದಿ ಹಬ್ಬಿಸಿ ವಿಕೃತಿ ಮೆರೆಯುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

WhatsApp Group Join Now

Spread the love

Leave a Reply