ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ಇತ್ತೀಚೆಗೆ ವಿಳಂಬವಾಗಿತ್ತು. ಆದರೆ, ಇನ್ನು 8 ದಿನಗಳೊಳಗೆ ಈ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, “ರಸ್ತೆ ಅಪಘಾತದ ನಂತರ ನಾನು ವಿಶ್ರಾಂತಿ ಪಡೆಯುತ್ತಿದ್ದೆ. ಆ ಕಾರಣದಿಂದಾಗಿ ಹಣ ವಿತರಣೆಯಲ್ಲಿ ವಿಳಂಬವಾಗಿದೆ. ಇನ್ನು 8 ದಿನಗಳೊಳಗೆ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು” ಎಂದು ಹೇಳಿದರು. ಕಳೆದ ಮೂರು ತಿಂಗಳಿಂದ ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಮಹಿಳೆಯರ ಖಾತೆಗೆ ಹಣ ಜಮೆಯಾಗದೆ ಇತ್ತು. ಆದರೆ, ಇನ್ನು 8 ದಿನಗಳೊಳಗೆ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು ಎಂದು ಅವರು ಖಚಿತಪಡಿಸಿದರು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೊಸ ವ್ಯವಸ್ಥೆಯಡಿ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ 5 ತಾಲ್ಲೂಕು ಪಂಚಾಯಿತಿಗಳಿಗೆ ಹಣವನ್ನು ನೀಡಲಾಗಿದೆ. ಅಲ್ಲಿಂದ ಸಿಡಿಪಿಒ ಮೂಲಕ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ಸರಿಯಾದ ಪ್ರಕ್ರಿಯೆಯಡಿ ಒಂದು ವಾರದಿಂದ 10 ದಿನಗಳೊಳಗೆ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಹೇಳಿದರು.