ವಿವಾದದ ಸುಳಿಯಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಜಮೀರ್ – ಸದಾಶಿವನಗರದಲ್ಲಿ ರಹಸ್ಯ ಮಾತುಕತೆ

Spread the love

ಕಾಂಗ್ರೆಸ್(Congress) ನಾಯಕ ಬಿ.ಜೆಡ್. ಜಮೀರ್ ಅಹ್ಮದ್ ಖಾನ್(Zameer Ahmed Khan) ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್(D.K. Shivakumar)ಅವರ ನಿವಾಸಕ್ಕೆ ಸೌಹಾರ್ದಯುತ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಹೌದು, ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಆಡಿಯೋ ಲೀಕ್ ವಿವಾದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಈ ಭೇಟಿ ನಡೆದಿರುವುದು ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಎಸ್‌ಡಿಪಿಐ (SDPI) ಮತ್ತು ಪಕ್ಷೇತರ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಜಮೀರ್ ಅವರು ಪ್ರಚೋದಿಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸಿಲು ಪ್ರಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರರು ಮತ್ತು ಮುಖಂಡರು ಜಮೀರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸಬೋಟಾಜ್ ಮಾಡಲು ಪ್ರಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರರು ಮತ್ತು ಮುಖಂಡರು ಜಮೀರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ನಡೆದ ಈ ಒಂದು ಗಂಟೆಯ ಸುದೀರ್ಘ ಸಭೆಯಲ್ಲಿ ಜಮೀರ್ ಅವರು ವೈರಲ್ ಆಡಿಯೋದ ಸತ್ಯಾಸತ್ಯತೆ ಮತ್ತು ಅದರ ಹಿಂದಿರುವ ರಾಜಕೀಯ ಪಿತೂರಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಖುದ್ದಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬದಲಾವಣೆಯ ಬಳಿಕ ಸಂಪುಟ ವಿಸ್ತರಣೆಯ ಚರ್ಚೆಗಳು ನಡೆಯುತ್ತಿದ್ದು, ಜಮೀರ್ ಅವರನ್ನು ಡಿಸಿಎಂ ಹುದ್ದೆಗೆ ಪರಿಗಣಿಸುವಂತೆ ಮುಸ್ಲಿಂ ಸಂಘಟನೆಗಳು ಒತ್ತಾಯಿಸುತ್ತಿವೆ. ಆದರೆ, ಈ ಆಡಿಯೋ ವಿವಾದವು ಅವರ ಮಂತ್ರಿಗಿರಿ ಮತ್ತು ಡಿಸಿಎಂ ರೇಸ್‌ನ ಭವಿಷ್ಯಕ್ಕೆ ಹಿನ್ನಡೆಯಾಗದಂತೆ ತಡೆಯಲು ಅವರು ಸಿಎಂ ನಿವಾಸಕ್ಕೆ ಸೌಹಾರ್ದ ಭೇಟಿಯ ನೆಪದಲ್ಲಿ ದೌಡಾಯಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

WhatsApp Group Join Now

Spread the love

Leave a Reply