ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

Spread the love

ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ.

ಆದರೆ ಅದಕ್ಕೆ ಪರಹಾರ ಮಾಡಿಕೊಂಡರೆ ಸರಿಯಾದೀತು ಎಂಬ ಪರಿಹಾರದ ಸಾಧ್ಯತೆಯನ್ನೂ ತಿಳಿಸಿದ್ದಾರೆ.

ಯುಗಾದಿ ನಂತರ ಮಳೆ, ಬೆಳೆ ಬಗ್ಗೆ ನಿರ್ಧಾರ ಆಗುತ್ತದೆ. ಸಂಕ್ರಾಂತಿಯಲ್ಲಿ ರಾಜ್ಯಕ್ಕೆ ಮತ್ತು ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಇಂಥಹ ವ್ಯಾವಹಾರಿಕ ವಿಷಯಗಳು ಬರುತ್ತವೆ. ಹೀಗಾಗಿ ಸಂಕ್ರಾಂತಿವರೆಗೆ ಏನೂ ತೊಂದರೆ ಇಲ್ಲ, ಸಂಕ್ರಾಂತಿ ಫಲವನ್ನು ನೋಡಿ ಹೇಳಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

WhatsApp Group Join Now

Spread the love

Leave a Reply