Krishi Bhagya Scheme : 2024 ನೇ ಸಾಲಿನ ಕೃಷಿ ಭಾಗ್ಯ ಯೋಜನೆಗೆ ಹೊಸ ಅರ್ಜಿಗಳು ಆರಂಭ.! ರೈತರು ಕೂಡಲೇ ಅರ್ಜಿ ಸಲ್ಲಿಸಿ

Krishi Bhagya Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.?

ಪ್ರತಿಯೊಬ್ಬ ಫಲಾನುಭವಿಗೆ ಘಟಕಗಳನ್ನು ಪ್ಯಾಕೇಜ್ ರೂಪದಲ್ಲಿ ಕಡ್ಡಾಯವಾಗಿ ಅನುಷ್ಠಾನ ಮಾಡುವುದು. ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯನ್ನು ಜಿಲ್ಲೆಯ ರೈತರ ಅವಶ್ಯಕತೆಗನುಗುಣವಾಗಿ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡಂತೆ ಕಾರ್ಯಕ್ರಮ ಅನುಷ್ಠಾನಗೊಳಿಸುವುದು.

ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

  • ಕ್ಷೇತ್ರ ಬದು ನಿರ್ಮಾಣ (ಸಾಮಾನ್ಯ ವರ್ಗ 80 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90 ರಷ್ಟು ಇರುತ್ತದೆ).
  • ಕೃಷಿ ಹೊಂಡ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ).
  • ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.).
  • ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 50ರಷ್ಟು ಇರುತ್ತದೆ.)
  • ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ಪೇಟ್ರೋಲ್ ಪಂಪ್‍ಸೆಟ್ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.)
  • ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90ರಷ್ಟು ಸಹಾಯಧನ ಇರಿಸಲಾಗಿದೆ) ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply