ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್‌… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ

Spread the love

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ತಮ್ಮ ಹುಟ್ಟು ಹಬ್ಬದ ಸಂಭ್ರದಲ್ಲಿದ್ದಾರೆ. ಕೋಟ್ಯಾಂತರ ಅಭಿಮಾನಿಗಳು, ಕಾರ್ಯಕರ್ತರು, ರಾಜಕೀಯ ಗಣ್ಯರು ಡಿ.ಕೆ ಶಿವಕುಮಾರ್‌ ಹುಟ್ಟು ಹಬ್ಬಕ್ಕೆ ಶುಭ ಹಾರೈಸುತ್ತಿದ್ದಾರೆ. ಈ ನಡುವೆ ಬೆಳಗಾವಿಯಲ್ಲಿನ ಬ್ಯಾನರ್‌ ಗಳು ಮತ್ತೆ ಹೊಸ ಚರ್ಚೆಯನ್ನೇ ಹುಟ್ಟು ಹಾಕಿವೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಎಲ್ಲಡೆ ಲಕ್ಷಾಂತರ ಜನರು ಬ್ಯಾನರ್‌ ಹಾಕಿ ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಅಂತೆಯೇ ಬೆಳಗಾವಿಯಲ್ಲಿಯೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಬ್ಯಾನರ್‌ ಅಳವಡಿಸಿದ್ದಾರೆ. ಆದರೆ ಇದರಲ್ಲಿ ಬರೆದ ಕೆಲ ಸಾಲುಗಳು ಚರ್ಚೆಗೆ ಗ್ರಾಸವಾಗಿವೆ.

ಬೆಳಗಾವಿಯಲ್ಲಿ ಡಿ.ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಬ್ಯಾನರ್ ಗಳು ರಾರಾಜಿಸುತ್ತಿವೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರಿಂದ ಈ ಬ್ಯಾನರ್ ಅಳವಡಿಕೆ ಆಗಿದೆ. ಜನ್ಮದಿನದ ಶುಭ ಕೋರುವ ಬ್ಯಾನರ್‌ನಲ್ಲಿ ಡಿ.ಕೆ ಶಿವಕುಮಾರ್‌ ಅವರ ಹೆಸರಿನ ಹಿಂದೆ ಮುಂದಿನ ಮುಖ್ಯಮಂತ್ರಿ ಎಂದು ಉಲ್ಲೇಖ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಜನ್ಮದಿನ ನಿಮಿತ್ತ ಚೆನ್ನಮ್ಮ ವೃತ್ತದಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಬೂದಿ ಮುಚ್ಚಿದ ಕೆಂಡದಂತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರದ ಸಚಿವರ ಪುತ್ರರೊಬ್ಬರು ಈ ರೀತಿ ಬ್ಯಾನರ್‌ ಹಾಕಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

WhatsApp Group Join Now

Spread the love

Leave a Reply