ಪೋಕ್ಸೋ ಕೇಸ್‌ ಡೀಲ್ ವೇಳೆ ಲಂಚ ಪಡೆಯುವಾಗ ಎಎಸ್‌ಐ, ಮಹಿಳಾ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ!

Spread the love

ಕಲಬುರಗಿ: ಸರ್ಕಾರಿ ಕೆಲಸ (Government Job) ದೇವರ ಕೆಲಸ ಅನ್ನೋ ಮಾತಿದೆ. ಆದರೆ ಜನಸೇವೆಗೆ ಬಂದ ಅಧಿಕಾರಿಗಳು ಜನಸಾಮಾನ್ಯರ ಬಳಿ ಲಂಚಕ್ಕಾಗಿ (Bribe) ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ (Lokayuktha Police) ಬಲೆಗೆ ಬಿದ್ದಿದ್ದಾರೆ.

ಇದನ್ನು ನೋಡಿ ಪಾಠ ಕಲಿಯಬೇಕಾಗಿದ್ದ ಲಂಚಬಾಕರು ಮತ್ತೆ ಮತ್ತೆ ಲಂಚಕ್ಕಾಗಿ ಕೈಯೊಡ್ಡುತ್ತಿದ್ದಾರೆ. ಹೀಗೆ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್‌ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ (Lady Police Constable) ಲೋಕಾಯುಕ್ತ ಬಳಿ ಲಾಕ್ ಆಗಿದ್ದಾರೆ.

ಲಂಚ ಸ್ವೀಕರಿಸುವ ವೇಳೆ ರೆಡ್ಹ್ಯಾಂಡ್ ಆಗಿ ಲಾಕ್

ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಸಿಪಿಐ ಅರುಣ್ ಕುಮಾರ್ ಮುರಗುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಪಿಎಸ್ಐ ಮತ್ತು ಮಹಿಳಾ ಕಾನ್ಸ್ಟೇಬಲ್ ಅವರನ್ನು ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ.

ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್ಟೇಬಲ್ ಜ್ಯೋತಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ವ್ಯಕ್ತಿಯೊಬ್ಬರ ಬಳಿ ಒಂದು ಸಾವಿರ ಹಣ ಪಡೆದು ಮತ್ತೆ 10 ಸಾವಿರಕ್ಕೆ ಕೊಡುವಂತೆ ಕೇಳಿದ್ದರು. ಬಳಿಕ 10 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದು, ಎಎಸ್ಐ ಶಿವಶರಣಪ್ಪ ಮತ್ತು ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಧಾರವಾಡದಲ್ಲಿ ಲೋಕಾ ದಾಳಿ

ಇತ್ತ ಧಾರವಾಡ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಧಾರವಾಡದ ಆರ್.ಎನ್.ಶೆಟ್ಟಿ ಬಳಿ ಇರುವ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದೇವರಾಜ್ ಶಿಗ್ಗಾವಿ ಅವರ ಕಚೇರಿ, ಮನೆ ಮತ್ತು ಆಪ್ತರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕುಂದಾಪುರ ಗುತ್ತಿಗೆದಾರ ಸುನೀಲ್ ಹೆಗಡೆ ಅವರಿಗೆ ಸೇರಿದ ಒಟ್ಟು 5 ಕಡೆ ಲೋಕಾಯುಕ್ತ ದಾಳಿ ನಡೆಸಿದ್ದು, 167 ಕಾಮಗಾರಿಯಲ್ಲಿ, 69 ಕಾಮಗಾರಿ ಕುರಿತು ತನಿಖೆ ನಡೆಸಲು ಮುಂದಾಗಿದ್ದಾರೆ. 2021 ರಿಂದ 2025 ವರೆಗೆ ನಡೆದಿರುವ ಕಳಪೆ ಕಾಮಗಾರಿ ಕುರಿತು ಲೋಕಾಯುಕ್ತಗೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

WhatsApp Group Join Now

Spread the love

Leave a Reply