ಯಾರೀ ಮಲ್ಲಿಕಾರ್ಜುನ ಮುತ್ಯಾ.? ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ವರ್ತನೆಗೆ ಭಾರೀ ಟೀಕೆ

Spread the love

ಯಾದಗಿರಿ : ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿ ಇರುವ ಮಲ್ಲಿಕಾರ್ಜುನ ಮುತ್ಯಾ (Mallikarjun mutya), ಈ ಬಾರಿ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಮುತ್ಯಾ ನಡೆಗೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.

ಇನ್ ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಶಹಾಪುರ ತಾಲ್ಲೂಕಿನ ರೋಜಾ ಮಹಲ್ ಗ್ರಾಮದ ಮಲ್ಲಿಕಾರ್ಜುನ ಮುತ್ಯಾನ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಅಪ್ರಾಪ್ತೆಯೊಂದಿಗೆ ಮಲ್ಲಿಕಾರ್ಜುನ ಮುತ್ಯಾ ಡ್ಯಾನ್ಸ್ ಮಾಡಿದ್ದಾನೆ.

ಡ್ಯಾನ್ಸ್ ಮಾಡಿದ್ದರೆ ವಿವಾದ ಆಗುತ್ತಿರಲಿಲ್ಲ. ಆಕೆಯ ಕುತ್ತಿಗೆ ಹಿಡಿದು ಎತ್ತಿ ಮಂಚದ ಮೇಲೆ ನಿಲ್ಲಿಸುವುದು, ಮೂಗು ಚಿವುಟುವುದು ಹಾಗೂ ಅಸಭ್ಯವಾಗಿ ಸ್ಪರ್ಶಿಸುವ ದೃಶ್ಯಗಳು ವಿಡಿಯೋದಲ್ಲಿ ಇವೆ. ಅದೇ ಕಾರಣಕ್ಕೆ ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಜನ ಕಿಡಿ ಕಾರುತ್ತಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ವರ್ತಿಸುತ್ತಿದ್ರೂ ಕೂಡಾ ಅಲ್ಲೇ ಇದ್ದ ಕೆಲ ಮಹಿಳೆಯರು ಮತ್ತು ಪುರುಷರು ವಿರೋಧ ಮಾಡಿಲ್ಲ. ತಪ್ಪು ಮಾಡುತ್ತಿದ್ದೀರಿ ಎಂದು ಹೇಳಿಲ್ಲ. ಅವರ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಗ್ರಹಿಸಿದ್ದಾರೆ. ಆದರೆ, ಕೆಲವರು ಮಲ್ಲಿಕಾರ್ಜುನ ಮುತ್ಯಾನ ಪರ ನಿಂತಿದ್ದಾರೆ. FIR ದಾಖಲು ಮಾಡಿ ಮಲ್ಲಿಕಾರ್ಜುನ ಮುತ್ಯಾನನ್ನು ಅರೆಸ್ಟ್ ಮಾಡಿ. ಪೊಲೀಸ್ ಇಲಾಖೆ ಸ್ವಯಂ ಪ್ರೇರಣೆ ಇಂದ ಇವನ ವಿರುದ್ಧ ಪ್ರಕರಣ ದಾಖಲಿಸಬೇಕು. ಇಂಥವರಿಂದ ನಾಗರೀಕ ಸಮಾಜಕ್ಕೆ ಏನು ಸಂದೇಶ ರವಾನೆ ಆಗುತ್ತೆ ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ಯಾರೀ ಮಲ್ಲಿಕಾರ್ಜುನ ಮುತ್ಯಾ.?

ಮಲ್ಲಿಕಾರ್ಜುನ ಮುತ್ಯಾ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದವರು. ಉತ್ತರ ಕರ್ನಾಟಕ ಭಾಗದಲ್ಲಿ ಮಲ್ಲಿಕಾರ್ಜುನ ಮುತ್ಯಾರನ್ನು ಭಕ್ತರು ಅಪ್ಪಾಜಿ ಎಂದು ಕರೆಯುತ್ತಾರೆ
ಮಲ್ಲಿಕಾರ್ಜುನ ಮುತ್ಯಾಗೆ ಜನರು ನಡೆದಾಡುವ ದೇವರು ಎಂದೂ ಸಂಬೋಧಿಸುತ್ತಾರೆ. ಸಣ್ಣ ವಯಸ್ಸಿನಲ್ಲೇ ಮಲ್ಲಿಕಾರ್ಜುನ ಮುತ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಫಾಲೋವರ್‌ಗಳನ್ನು ಹೊಂದಿದ್ದಾರೆ.

WhatsApp Group Join Now

Spread the love

Leave a Reply