ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವರಿಗೆ ಶ್ವಾಸಕೋಶದ ಸೋಂಕು (Lung Infection) ತೀವ್ರವಾಗಿದ್ದು, ಅವರ ಸ್ಥಿತಿ ಕಳವಳಕಾರಿಯಾಗಿದೆ. ಪ್ರಸ್ತುತ ಅವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು.
ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ವಾಸಕೋಶ ಕಸಿ (Lung Transplantation) ಮಾಡುವ ಬಗ್ಗೆಯೂ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಸಚಿವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎನ್ನಲಾಗಿದ್ದು, ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ.
Breaking News : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ.!
WhatsApp Group
Join Now