ಮೊಬೈಲ್‌ನಲ್ಲಿ ಭಾವುಕ ವಾಟ್ಸ್ಯಾಪ್ ಸ್ಟೇಟಸ್ ಹಾಕಿ 19 ವರ್ಷದ ವಿದ್ಯಾರ್ಥಿಯೊಬ್ಬನು ನೀರಿನ ಕಟ್ಟೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧನುಷ್ (19) ಎಂದು ಗುರುತಿಸಲಾಗಿದೆ.
ಇವರು ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಸಮೀಪದ ಗೋಪ್ಪೆನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತುರುವೇಕೆರೆ ಪಟ್ಟಣದಲ್ಲಿರುವ ಡಿಪ್ಲೊಮಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು.
ನಿನ್ನೆ ಬೆಳಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದ ಧನುಷ್, ಸಂಜೆ ಆದರೂ ಪೋಷಕರ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ವಿವಿಧೆಡೆ ಹುಡುಕಾಟ ನಡೆಸಿದರು. ಈ ವೇಳೆ ಡಿಪ್ಲೊಮಾ ಕಾಲೇಜಿನ ಹಿಂಭಾಗದಲ್ಲಿರುವ ನೀರಿನ ಕಟ್ಟೆಯ ಬಳಿ ಧನುಷ್‌ನ ಬ್ಯಾಗ್, ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಯಿತು.
ಆತ್ಮಹತ್ಯೆಗೆ ಮುನ್ನ ಧನುಷ್ ತನ್ನ ಮೊಬೈಲ್‌ನಲ್ಲಿ “ನಿನೇ ಖುಷಿಯಾಗಿರು, ನಾನು ಹೋಗ್ತಾ ಇದ್ದೀನಿ ಬಾಯ್. ಈ ಪ್ರಪಂಚನೇ ಬಿಟ್ಟು ಹೋಗ್ತಿದ್ದೀನಿ” ಎಂದು ವಾಟ್ಸ್ಯಾಪ್ ಹಾಗೂ ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಹಾಕಿದ್ದಾನೆ.
ತಕ್ಷಣ ಪೋಷಕರು ತುರುವೇಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ನೀರಿನ ಕಟ್ಟೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿದರು. ನಂತರ ಮೃತದೇಹವನ್ನು ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸೂಚನೆ: ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳು ಇದ್ದರೆ ತಕ್ಷಣ ಸಹಾಯ ಪಡೆಯುವುದು ಅತ್ಯಂತ ಮುಖ್ಯ. ಕುಟುಂಬಸ್ಥರು, ಸ್ನೇಹಿತರು ಅಥವಾ ತಜ್ಞರ ನೆರವು ಪಡೆಯಬಹುದು.
ನೀನೇ ಖುಷಿಯಾಗಿರು..! – ಮೊಬೈಲ್ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
WhatsApp Group
Join Now