ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶದಿಂದ ಮನನೊಂದ ತಂದೆಯೊಬ್ಬ ತನ್ನ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿಯ ಜೊತೆ ತಾನು ನೇಣಿಗೆ ಶರಣಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ.
ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಶೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಡಿ.22 ರಂದು ರಾತ್ರಿ ಈ ಘಟನೆ ನಡೆದಿದೆ. ಪತಿ ಕಲಾಧರನ್ ಹಾಗೂ ಆತನ ಪತ್ನಿ ಬೇರೆಯಾಗಿದ್ದರು. ದಂಪತಿಯ ಎರಡು ಮಕ್ಕಳು ಕಲಾಧರನ್ ಜೊತೆಗಿದ್ದರು. ಈ ಕುರಿತ ಕೇಸ್ ಕೋರ್ಟ್‌ನಲ್ಲಿ ಬಾಕಿಯಿತ್ತು. ಇತ್ತೀಚಿಗಷ್ಟೇ ಕೋರ್ಟ್ ಆದೇಶ ಹೊರಡಿಸಿ, ಮಕ್ಕಳನ್ನು ಪತ್ನಿಯ ಸುಪರ್ದಿಗೆ ನೀಡಬೇಕೆಂದು ತಿಳಿಸಿತ್ತು.
ಕೋರ್ಟ್ ತೀರ್ಪಿನ ಬಳಿಕ ಮಕ್ಕಳನ್ನು ತಕ್ಷಣ ತಮ್ಮ ಸುಪರ್ದಿಗೆ ನೀಡಬೇಕೆಂದು ಪತ್ನಿ ಪೊಲೀಸರನ್ನು ಭೇಟಿಯಾಗಿದ್ದರು. ಅದರಂತೆ ಇಂದು (ಡಿ.23) ಮಕಳನ್ನು ಪತ್ನಿಯ ವಶಕ್ಕೆ ಕೊಡುವಂತೆ ಕಲಾಧರನ್ ತಂದೆ ಉಣ್ಣಿಕೃಷ್ಣನ್‌ಗೆ ಪೊಲೀಸರು ಫೋನ್ ಮಾಡಿ ತಿಳಿಸಿದ್ದರು.
ಕೋರ್ಟಿನ ಆದೇಶ ಕಲಾಧರನ್‌ಗೆ ಒಪ್ಪಿಗೆ ಇರಲಿಲ್ಲ. ಹೀಗಾಗಿ ತನ್ನ ಎರಡು ಮಕ್ಕಳಿಗೂ ವಿಷವುಣಿಸಿ, ಬಳಿಕ ತಾಯಿಯ ಜೊತೆಗೆ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ತಂದೆ ಉಣ್ಣಿಕೃಷ್ಣನ್ ರಾತ್ರಿ ಮನೆಗೆ ಬಂದಾಗ ಎಷ್ಟು ಕೂಗಿದರೂ ಯಾರು ಬಾಗಿಲು ತೆರೆಯಲಿಲ್ಲ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಬಾಗಿಲು ತೆಗೆದ ಬಳಿಕ ಪ್ರಕರಣ ಬಯಲಾಗಿದೆ.
ಉಷಾ ಮತ್ತು ಕಲಾಧರನ್ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಕ್ಕಳು ನೆಲದ ಮೇಲೆ ಸತ್ತಿರುವುದು ಪತ್ತೆಯಾಗಿದೆ. ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪಯ್ಯನ್ನೂರು ಪಟ್ಟಣದ ಆಟೋ ಚಾಲಕ ಉಷಾ ಅವರ ಪತಿ ಎ.ಕೆ. ಉನ್ನಿಕೃಷ್ಣನ್ ಅವರು ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಮರಳಿದಾಗ ಮನೆ ಲಾಕ್ ಆಗಿರುವುದನ್ನು ಕಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದ ನಂತರವೇ ಬಾಗಿಲು ತೆರೆಯಲಾಯಿತು.
ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
WhatsApp Group
Join Now