ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

Spread the love

ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು.

ಮನೆಯ ತಂಬಾಕು ಬ್ಯಾರನ್ ಪೋಲ್ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಹೇಮಲತಾ ಡೆತ್ ನೋಟ್ಬರೆದಿದ್ದು, ಅದರಲ್ಲಿ ಗಂಡ ಮಹದೇವ, ಮೈದುನ, ಅತ್ತೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now

Spread the love

Leave a Reply