ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಘೋರ ದುರಂತ : ಶಾಲಾ ಬಸ್ ಹರಿದು ಮಗಳ ಕಣ್ಣೆದುರೇ ತಾಯಿ ಸಾವು.!

Spread the love

ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ರಸ್ತೆ ಅಪಘಾತ ಸಂಭವಿಸಿದ್ದು, ಶಾಲೆಗೆ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರು ಶಾಲಾ ಬಸ್‌ಗೆ ಬಲಿಯಾಗಿದ್ದಾರೆ. ಅತ್ಯಂತ ನೋವಿನ ಸಂಗತಿಯೆಂದರೆ, ಈ ದುರಂತವನ್ನು ಅವರ ಮಗಳು ಕಣ್ಣಾರೆ ನೋಡಬೇಕಾದ ಪರಿಸ್ಥಿತಿ ಎದುರಾಗಿದೆ.

ಮಾಹಿತಿಯ ಪ್ರಕಾರ, ಕಾಂತ ಎಂಬ ಮಹಿಳೆ ತನ್ನ ಮಗಳನ್ನು (ನೇಹಾ ) ಕಾಲೇಜಿಗೆ ಬಿಡಲು ತೆರಳುತ್ತಿದ್ದ ವೇಳೆ ರಸ್ತೆ ದಾಟುವ ಸಂದರ್ಭದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯನ್ನು ಕಂಡ ಮಗಳು ಆಘಾತಕ್ಕೊಳಗಾಗಿದ್ದು, ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು ತರಿಸಿದೆ.

ಅಪಘಾತದ ಬಳಿಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲಾ ಬಸ್ ಚಾಲಕರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಚಾಲಕರ ವಿರುದ್ಧದ ಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಘಟನೆ ಬೆಂಗಳೂರಿನಲ್ಲಿ ಶಾಲಾ ವಾಹನಗಳ ಸುರಕ್ಷಿತ ಚಾಲನೆ ಕುರಿತು ಮತ್ತೆ ಪ್ರಶ್ನೆಗಳನ್ನು ಎಬ್ಬಿಸಿದ್ದು, ಪೋಷಕರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

WhatsApp Group Join Now

Spread the love

Leave a Reply