ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

WhatsApp Group Join Now

FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ

ಹೊಯ್ಸಳ ಸಿಬ್ಬಂದಿಯೊಬ್ಬರು ಮಹಿಳೆಯ ಶವವನ್ನು ಗಮನಿಸಿದ್ದಾರೆ. ಮಹಿಳೆಯ ಮೃತದೇಹದ ಪಕ್ಕದಲ್ಲಿಯೇ ಆಕೆಯ ವ್ಯಾನಿಟಿ ಬ್ಯಾಗ್, ಚಪ್ಪಲಿ, ಚೂಡಿದಾರ್ ಮತ್ತು ಮೊಬೈಲ್ ಫೋನ್ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ, ಬಿಬಿಎಂಪಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾರೆ. ಗುರುವಾರ ಸಂಜೆ ಎಷ್ಟೊತ್ತಾದರೂ ಮನೆಗೆ ಬಾರದಿದ್ದರಿಂದ ಆಕೆಯ ಪತಿ ಹುಡುಕಲು ಆರಂಭಿಸಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಿಳೆಯನ್ನು ಆಕೆಗೆ ತಿಳಿದಿರುವ ಯಾರೋ ಕೊಲೆ ಮಾಡಿರಬಹುದು. ದಾಳಿಯ ನಂತರ ದುಷ್ಕರ್ಮಿಯು ಆಕೆ ಬ್ಯಾಗ್‌ನಲ್ಲಿದ್ದ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸಾಂದರ್ಭಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆಯ ಪತಿ ಬಳಿ ಪಾಸ್‌ಪೋರ್ಟ್ ಇದ್ದು, ಮಹಿಳೆಯ ಬಳಿ ಇರಲಿಲ್ಲ. ಹೀಗಾಗಿ, ಆಕೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Leave a Reply