Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Nekar Samman Scheme : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ 5000 ಆರ್ಥಿಕ ನೆರವು ರಾಜ್ಯ ಸರ್ಕಾರ ನೀಡುತ್ತಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಿ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಎಲ್ಲಿ ಅರ್ಜಿ ಸಲ್ಲಿಸುವುದು.?

ಆಸಕ್ತ ಹಾಗೂ ಅರ್ಹರು ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

ಆಸಕ್ತ ಕೈಮಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಹಾಗೂ ಕಾರ್ಮಿಕರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 30 ಅಕ್ಟೋಬರ್ 2024

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply