ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!
ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ‘ನಾಯಕತ್ವ ಬದಲಾವಣೆ’ಯ ವದಂತಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬ್ರೇಕ್ ಹಾಕಿದ್ದಾರೆ. WhatsApp Group Join Now “ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೈಶಾಖ ಬುದ್ಧ ಪೂರ್ಣಿಮೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯದಲ್ಲಿ ನಾಯಕತ್ವದ ಕುರಿತು ಗೊಂದಲಗಳಿರುವುದು ನಿಜ. ಆದರೆ, ಈ ಗೊಂದಲಗಳನ್ನು … Read more