Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!

Parihara Payment : ನಮಸ್ಕಾರ ಸ್ನೇಹಿತರೇ, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ. ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ.

ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು. ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.

ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಿರೇಮಲ್ಲನಹೊಳೆ ಗ್ರಾಮದಲ್ಲಿ ಕೆರೆ ಕೋಡಿಯಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿದ್ದರಿಂದ ಇಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಇಲ್ಲಿರುವ 35 ಮನೆಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಸೂಚಿಸಲಾಗಿದ್ದು ಮನೆ ಪರಿಹಾರದ ಜೊತೆಗೆ ಬೇರೆಡೆ ನಿವೇಶನ ನೀಡಿ ಇವರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ.

ಇವರಿಗೆ ಮುಂದಿನ ಎರಡು ತಿಂಗಳಲ್ಲಿ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ. ಮತ್ತು ಇದೇ ಗ್ರಾಮದಲ್ಲಿ ಮನೆಗಳು ಕುಸಿದಿದ್ದು ಈ ಮನೆಗಳಿಗೂ ಪರಿಹಾರದ ಜೊತೆಗೆ ಬದಲಿ ನಿವೇಶನ ಹಾಗೂ ಮನೆ ನಿರ್ಮಾಣ ಮಾಡಿಕೊಡಲು ತಿಳಿಸಲಾಗಿದೆ ಎಂದರು.

Leave a Reply