‘ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!

Spread the love

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದು ಸಚಿವರಿಗೆ ಡಿನ್ನರ್‌ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ನಿನ್ನೆ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮತ್ತು ಸತೀಶ್‌ ಕುಮಾರ್‌ ಮುಖಾಮುಖಿ ಬೇಟಿಯಾದ ಬಳಿಕ ಈ ಡಿನ್ನರ್‌ ಪಾರ್ಟಿಯನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ರಾಹುಲ್‌ ಗಾಂಧಿ ಬೇಜಾರು ಆಗಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭೆಯಲ್ಲಿ ಹೀನಾಯ ಸೋಲಿನಿಂದ ಮನಸ್ಸು ಕೆಡಿಸಿಕೊಂಡಿರುವ ರಾಹುಲ್‌ ಗಾಂಧಿ ತಮ್ಮ ಆಪ್ತರ ಬಳಿ ಕರ್ನಾಟಕದ ರಾಜಕೀಯ ಬೆಳವಣಿಗೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೂ ರಾಹುಲ್‌ ಗಾಂಧಿ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಭೇಟಿಯಾಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಸದ್ಯದದ ಬೆಳವಣಿಗೆಯಲ್ಲಿ ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರೆ ಮಾತ್ರ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸಿಎಂ ಖುರ್ಚಿ ಬಿಕ್ಕಟ್ಟಿನ ಪರಿಸ್ಥಿತಿ ತಿಳಿಯಾಗಲಿದೆ.

WhatsApp Group Join Now

Spread the love

Leave a Reply