ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

PM Awas Yojana : ನಮಸ್ಕಾರ ಸ್ನೇಹಿತರೇ, ವರದಿಯ ಪ್ರಕಾರ ಭಾರತದಲ್ಲಿ ಇನ್ನು ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿ, ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ.

ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana). ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆಯಿಲ್ಲದ ಆರ್ಥಿಕವಾಗಿ ಹಿಂದುಳಿದವರಿಗೆ ಸಬ್ಸಿಡಿ ಮತ್ತು ಸಹಾಯಧನ ನೀಡುವುದರ ಮೂಲಕ ಅವರಿಗೆ ತಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಲು ಪ್ರಮುಖ ಪಾತ್ರ ವಹಿಸಿದೆ.

WhatsApp Group Join Now

ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ

  • ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ₹1.30 ಲಕ್ಷದಿಂದ ₹2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ.
  • ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ ₹1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ ₹1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ.

ಇನ್ನು ಈ ಯೋಜನೆ ಅಡಿಯಲ್ಲಿ ಅರ್ಜಿದಾರರು 20 ವರ್ಷಗಳ ಅವಧಿಗೆ ಶೇಕಡಾ 6.50% ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಈ ಹಣ ನೇರವಾಗಿ ಅರ್ಜಿದಾರರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ವೃದ್ಧ ಮತ್ತು ಅಂಗವಿಕಲ ಅರ್ಜಿದಾರರಿಗೆ ಈ ಬಡ್ಡಿ ದರ ಇನ್ನೂ ಕಡಿಮೆ ಇರಲಿದೆ.

WhatsApp Group Join Now

ಇದನ್ನೂ ಕೂಡ ಓದಿ : Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್

ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.?

  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ನಾಗರಿಕನಾಗಿರಬೇಕು.
  • ಸ್ವಂತ ಮನೆಯನ್ನು ಹೊಂದಿರಬಾರದು.
  • 18 ವರ್ಷ ಮೇಲ್ಪಟ್ಟವನಿರಬೇಕು.
  • ಅರ್ಜಿದಾರ ತನ್ನ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. ಅದರ ಜೊತೆಗೆ ಬಿಪಿಎಲ್ ಕಾರ್ಡ್ ಅನ್ನೂ ಹೊಂದಿರಬೇಕು.
  • ವಾರ್ಷಿಕ ಆದಾಯ 6 ಲಕ್ಷದ ಒಳಗೇ ಇರಬೇಕು.

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾಬ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಸ್ವಚ್ಛ ಭಾರತ್ ಮಿಶನ್ ನೋಂದಣಿ
  • ಮೊಬೈಲ್ ನಂಬರ್

ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

WhatsApp Group Join Now

ಹೇಗೆ ಅರ್ಜಿ ಸಲ್ಲಿಸುವುದು.?

ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ವೆಬ್ ಸೈಟ್ ಲಿಂಕ್ ಓಪನ್ ಮಾಡಿದಾಗ ನಿಮಗೆ ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆಯ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆಯನ್ನು ಆಯ್ಕೆ ಮಾಡಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಾಕಿ ಅರ್ಜಿ ಸಲ್ಲಿಸಿ. ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಕಷ್ಟವಾದರೆ ನಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ವೆಬ್ ಸೈಟ್ ಲಿಂಕ್ :- Pradhan Mantri Awas Yojana

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply