PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !

PM Fasal Bima Yojana : ರೈತರು 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಯೋಜನೆಗೆ ಹೆಸರು ನೋಂದಾಯಿಸಿದ ರೈತರಿಗೆ ಬೆಳೆ ನಷ್ಟವಾದರೆ ಪರಿಹಾರ ಸಿಗಲಿದೆ.

ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶ.

WhatsApp Group Join Now

ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು.

WhatsApp Group Join Now

ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.

ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋೂಂದಾಯಿಸಿಕೊಳ್ಳಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.

Leave a Reply