PM Kisan Yojana Amount : ಪಿಎಂ ಕಿಸಾನ್ 2000/- ಹಣ ಖಾತೆಗೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಬೇಗ ಚೆಕ್ ಮಾಡಿ ನೋಡಿ

PM Kisan Yojana Amount : ನಮಸ್ಕಾರ ಸ್ನೇಹಿತರೇ, 2024ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು. ಇದಾದ ಬಳಿಕ ದೇಶದ ರೈತರಿಗೆ ಸಿಹಿಸುದ್ಧಿ ನೀಡಿ, ದೇಶದ ಎಲ್ಲಾ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Nidhi) 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕಡತಕ್ಕೆ ಸಹಿ ಹಾಕಿದರು.

ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ಫೆಬ್ರುವರಿ ತಿಂಗಳಲ್ಲಿ 16ನೇ ಕಂತಿನ ಹಣವನ್ನ ದೇಶದ ಎಲ್ಲ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿತ್ತು. 17ನೇ ಕಂತಿನ ಹಣ ₹2,000/- ಕಿಸಾನ್ ಸಮ್ಮಾನ್ ಯೋಜನೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿ ಬಿ ಟಿ ಮುಖಾಂತರ ಇಂದು ಜಮಾ ಮಾಡಲಾಗುತ್ತದೆ.

ದೇಶದಲ್ಲಿ ಒಟ್ಟು 9.4 ಕೋಟಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಫಲಾನುಭವಿಗಳಾಗಿದ್ದು, ಇಂದು 20,000 ಕೋಟಿ ಹಣವನ್ನು ರಿಲೀಸ್ ಮಾಡಲಾಗುತ್ತದೆ. 2019ರಲ್ಲಿ ಯಶಸ್ವಿಯಾಗಿ ಜಾರಿಗೆ ಬಂದಂತಹ ಈ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರ ಆರ್ಥಿಕತೆಯನ್ನು ಸುಭದ್ರಗೊಳಿಸುವ ಸಲುವಾಗಿ ಜಾರಿಗೆ ತರಲಾಗಿತ್ತು.

ಇದನ್ನೂ ಕೂಡ ಓದಿ : Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್

ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಫಲಾನುಭವಿಗಳಾಗಿದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಸಹಾಯದಿಂದ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಕುರಿತು ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಅಧೀಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡುವ ಮೂಲಕ ಮಾಹಿತಿಯನ್ನು ತಿಳಿಯಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply