ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿತ್ತು, ಈ ವೇಳೆ ರಭಸವಾಗಿ ಬಂದ ಖಾಸಗಿ ಬಸ್ ಏಕಾಏಕಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು.
ಸದ್ಯ ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳ ಪೈಕಿ 13 ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಉಳಿದವರಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರತ್ಯೇಕ ಘಟನೆ :- ಮರಕ್ಕೆ ಡಿಕ್ಕಿ ಹೊಡೆದ ಕಾರು – ಇಬ್ಬರು ಸಾ*ವು, ನಾಲ್ವರ ಸ್ಥಿತಿ ಗಂಭೀರ
ಮರಕ್ಕೆ ಕಾರುಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದರೆ, ನಾಲ್ವರಿಗೆ ಗಂಭೀರವಾದ ಗಾಯಗಳಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್ ನಲ್ಲಿ ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ. ಇನ್ನು ಕಾರಿನಲ್ಲಿ ಇದ್ದಂತಹ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಇನ್ನು ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಕಾರಣವೇನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ.
ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ
WhatsApp Group
Join Now