Pumpset Scheme : ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ ಯಾವುದು.?

Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಬೇಕಾಗುವ ದಾಖಲೆಗಳೇನು.?

  • ಭರ್ತಿ ಮಾಡಿದ ಅರ್ಜಿ
  • ಆರ್ ಟಿಸಿ (RTC)
  • ಆಧಾರ್ ಕಾಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಭಾವಚಿತ್ರ
  • ಬಿಪಿಎಲ್ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಮೊಬೈಲ್ ನಂಬರ್

ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-

ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದುಕೊಳ್ಳಬಹುದು.)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.

Leave a Reply